ದಾವಣಗೆರೆ, ಮೇ 15 – ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕೆ.ಎಚ್. ಗಂಗಾಧರ್ ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೇರಿಯಾ ನಿಯಂತ್ರಿಸುವ ಮತ್ತು ಅಂತಿಮವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಪ್ರತಿ ವರ್ಷ ಏ. 25 ರಂದು ವಿಶ್ವ ಮಲೇರಿಯಾ ದಿನ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ನಾಡಿದ್ದು ದಿನಾಂಕ 17 ರಂದು ಬೆಳಗ್ಗೆ 9.30ಕ್ಕೆ ಚಾಮರಾಜನಗರ ವೃತ್ತದಿಂದ ಬಾಷಾ ನಗರದವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಡಿ. ಮುರುಳೀಧರ್, ಡಾ. ಸುರೇಶ್ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು