ದಾವಣಗೆರೆ, ಮೇ 15- ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಿಗೆ ಅಂತರ್ಜಲ ಬಳಕೆ ದಾರರು ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರ (ಎನ್ಓಸಿ) ಪಡೆಯಬೇಕು.
ಅಂತರ್ಜಲ ಬಳಕೆದಾರರು ಕರ್ನಾಟಕ ಅಂತರ್ಜಲ ಪ್ರಾಧಿಕಾರ ದಿಂದ ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರವನ್ನು(ಎನ್ಓಸಿ) ಪಡೆಯಬೇಕಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಎಲ್ಲಾ ಅಂತರ್ಜಲ ಬಳಕೆದಾರರು ನಿರಾಕ್ಷೇಪಣಾ ಪತ್ರ ಪಡೆ ಯಲು http://karnataka.gov.in/ ವೆಬ್‌ಸೈಟ್‍ನಲ್ಲಿ ಸಲ್ಲಿಸಲು ಅವಕಾಶವಿರುತ್ತದೆ. ಈ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಾದಂತ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಮತ್ತು ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನ ರಂಜನೆ, ಮೂಲಭೂತ ಸೌಕರ್ಯ ಉದ್ದೇಶಕ್ಕಾಗಿ ಅಂತರ್ಜಲವನ್ನು ಬಳ ಸುವವರು ಕಡ್ಡಾಯ ನಿರಾಕ್ಷೇಪಣಾ ಪತ್ರವನ್ನು (ಎನ್ಓಸಿ) ಪಡೆಯಬೇಕು ಎಂದು ಕ.ರಾ.ಮಾ.ನಿ ಮಂಡಳಿ ಪರಿ ಸರ ಅಧಿಕಾರಿ ಲಕ್ಷ್ಮಿಕಾಂತ್ ತಿಳಿಸಿದ್ದಾರೆ.