ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಗರದಲ್ಲಿ ಇಂದು ಕಾಂಗ್ರೆಸ್ ಸಭೆ

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಸಂಜೆ 4-30ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಮುಖರು ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್‍.ಬಿ. ಮಂಜಪ್ಪ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು  ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ. ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್, ಕರ್ನಾಟಕ ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರೊ. ಸಿ. ಎಚ್. ಮುರುಗೇಂದ್ರಪ್ಪ ಭಾಗವಹಿಸಲಿದ್ದಾರೆ.

error: Content is protected !!