ಓಬಜ್ಜಿಹಳ್ಳಿ ಬಳಿ ಯುವಕನ ಕೊಲೆ

ದಾವಣಗೆರೆ, ಮೇ 16- ತಾಲ್ಲೂಕಿನ ಓಬಜ್ಜಿಹಳ್ಳಿ ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನೋರ್ವನನ್ನು ಚಾಕುವಿನಿಂದ ಚುಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ನಗರದ ಬೂದಾಳ್ ನಿವಾಸಿ ಸಂದೀಪ್ (24) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಕೊಲೆಯಾದ ಸಂದೀಪ್ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗುತ್ತಿದೆ. ಬುಧವಾರ ರಾತ್ರಿ ಪಾರ್ಟಿ ಮಾಡಲು ಹೋಗಿದ್ದರು ಎನ್ನಲಾಗುತ್ತಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಎಸ್​ಪಿ ಉಮಾ ಪ್ರಶಾಂತ್, ಗ್ರಾಮಾಂತರ ಠಾಣೆ ಸಿಪಿಐ ಕಿರಣ್​ ಕುಮಾರ್​ ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ಶೋಧ ನಡೆಯುತ್ತಿದೆ.

error: Content is protected !!