ದಾವಣಗೆರೆ,ಮೇ 16 – ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಘಟಕದ ವತಿಯಿಂದ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಜಿಲ್ಲೆಯ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಂದ `ಸ್ವಾಭಿಮಾನ ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 70 ಮತ್ತು ಪಿ.ಯು.ಸಿ.ಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಿ.ಜೆ.ಬಡಾವಣೆಯಲ್ಲಿರುವ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಛೇರಿಯಲ್ಲಿ ಅಥವಾ ಸಮಾಜದ ಅಂತರ್ಜಾಲ ವೆಬ್ಸೈಟ್ www.panchamasali.org ನಲ್ಲಿ ಅರ್ಜಿಯನ್ನು ಪಡೆದು, ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ (08192)-222008 ಸಂಪರ್ಕಿಸಬಹುದು.