ಹನಗವಾಡಿ ಸಮೀಪದ ಬೈಪಾಸ್ ರಸ್ತೆಯಲ್ಲಿರುವ ಪ್ರೊ. ಬಿ.ಕೃಷ್ಣಪ್ಪ ಸಾಂಸ್ಕೃತಿಕ ಭವನದಲ್ಲಿ ಇಂದು ಮತ್ತು ನಾಳೆ ಭಾನುವಾರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ರಾಜ್ಯಮಟ್ಟದ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂಡಸಘಟ್ಟ ಕ್ಯಾಂಪ್ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಬಿ.ಅರುಣ್ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಹನ್ನೆರಡನೇ ವರ್ಷದಲ್ಲಿ ಮುಂದುವರೆಯು ತ್ತಿದ್ದು, ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ಸಂಘಟನೆಯನ್ನು ರಾಜ್ಯದೆಲ್ಲೆಡೆ ಮತ್ತಷ್ಟು ವಿಸ್ತರಿಸಿ, ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಡಾ.ಸಿ.ಆರ್.ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಶಿಬಿರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅರುಣ್ಕುಮಾರ್ ಕೋರಿದ್ದಾರೆ.