ಶ್ರೀ ಮಡಿವಾಳ ಮಾಚಿದೇವ ಸಂಘದ ಜಿಲ್ಲಾ ಸಮಿತಿಯಿಂದ ಹುಬ್ಬಳ್ಳಿ ನಗರದ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗರ ಅವರನ್ನು ಹತ್ಯೆಗೈದ ಆರೋಪಿಗಳನ್ನು ಹಾಗೂ ಕಲಬುರ್ಗಿ ಜಿಲ್ಲಾ, ಸೇಡಂ ತಾಲ್ಲೂಕಿನ ದೇವನೂರು ಗ್ರಾಮದ ಅರ್ಜುನಪ್ಪ ಹಣಮಂತನ ಮೇಲೆ ಹಲ್ಲೆ ಮಾಡಿರುವ ಹಲ್ಲೆಕೋರರನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಲು ಒತ್ತಾಯಿಸಿ, ಪ್ರತಿಭಟನಾ ಮೆರವಣಿಗೆಯನ್ನು ಇಂದು ಬೆಳಿಗ್ಗೆ 11ಕ್ಕೆ ಜಯದೇವ ವೃತ್ತದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ಅಧ್ಯಕ್ಷ ಎಂ. ನಾಗೇಂದ್ರಪ್ಪ, ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್ ತಿಳಿಸಿದ್ದಾರೆ.
February 23, 2025