ಶಿವಮೊಗ್ಗ, ಮೇ 21 – ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದೆ. ಭದ್ರಾ ಜಲಾಶಯಕ್ಕೆ ಸೋಮವಾರ 1347 ಕ್ಯೂಸೆಕ್ಸ್ ಇದ್ದ ಒಳ ಹರಿವು ಮಂಗಳವಾರ ಜಲಾಶಯದ ನೀರಿನ ಮಟ್ಟ 115 ಅಡಿ 7 ಇಂಚು ಆಗಿದ್ದು, ಕಳೆದ ವರ್ಷ ಈ ದಿನ ಜಲಾಶಯದಲ್ಲಿ 139 ಅಡಿ 2 1/2 ಇಂಚು ನೀರಿತು. ಗಾಜನೂರಿನ ತುಂಗಾ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ತುಂಗಭದ್ರಾ ನದಿ ಪಾತ್ರದ ನಗರ-ಪಟ್ಟಣಗಳಲ್ಲಿ ಮತ್ತು ಹಳ್ಳಿಗಳಲ್ಲಿ ಮಳೆ ಆಗುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ನಿಧಾನವಾಗಿ ಪ್ರಾರಂಭವಾಗಿದೆ. ಈ ಬೆಳವಣಿಗೆಗಳು ರೈತ ಸಮುದಾಯಕ್ಕೆ ಹರ್ಷ ತಂದಿದೆ.
January 23, 2025