ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ಐಕ್ಯೂಎಸಿ ಸಾಂಸ್ಕೃತಿಕ ಸಮಿತಿ ವತಿಯಿಂದ ಇಂದು ಬೆಳಿಗ್ಗೆ 11.30 ಗಂಟೆಗೆ `ಬುದ್ಧ ಪೂರ್ಣಿಮಾ – ದುಃಖದಿಂದ ಪರಮಾನಂದದ ಕಡೆಗೆ’ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.
ಕರುಣಾ ಜೀವ ಕಲ್ಯಾಣ ಟ್ರಸ್ಟ್ ಕಾರ್ಯದರ್ಶಿ ಶಿವನಕೆರೆ ಬಸವಲಿಂಗಪ್ಪ ಉಪನ್ಯಾಸ ನೀಡುವರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೊಪ್ಪಿನ್ ಅಧ್ಯಕ್ಷತೆ ವಹಿಸುವರು.
ಐಕ್ಯೂಎಸಿ ಕೋ-ಆರ್ಡಿನೇಟರ್ ಆರ್.ಆರ್.ಶಿವಕುಮಾರ್, ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ಡಾ. ಆರ್.ಜಿ. ಕವಿತಾ ಉಪಸ್ಥಿತರಿರುವರು.