ಕೊಟ್ಟೂರಿನಲ್ಲಿ ಇಂದು ಬಿಕ್ಕಿ ಮರಡಿ ದುರುಗಮ್ಮ ದೇವಿ ಜಾತ್ರೆ ಸಂಭ್ರಮ

ಧಾರ್ಮಿಕ ಮಹೋತ್ಸವಗಳಲ್ಲೊಂದಾದ ವಿಶಿಷ್ಟತೆಯಿಂದಾಗಿ ಪ್ರಖ್ಯಾತಿಗೊಂಡಿರುವ ಸುಕ್ಷೇತ್ರ ಕೊಟ್ಟೂರು ಹುಣ್ಣಿಮೆಯ ದಿನವಾದ ಇಂದು ಮತ್ತೊಮ್ಮೆ ವೈಶಿಷ್ಟ್ಯತೆಗೆ ಸಾಕ್ಷಿಯಾಗಲಿದೆ. 

ಅದುವೇ ಜೀವಂತ ಕೋಳಿಗಳನ್ನು ರಥಕ್ಕೆ ತೂರುವ ವೈಶಿಷ್ಟ ರಥೋತ್ಸವವಾಗಿದೆ. ಹೌದು, ಪ್ರತೀ ವರ್ಷದ ಸಂಪ್ರದಾಯದಂತೆ ಆಗಿ ಹುಣ್ಣಿಮೆಯ ದಿನದಂದು ನಡೆಯುವ ಪಟ್ಟಣದ ಬಿಕ್ಕಿ ಮರಡಿ ದುರುಗಮ್ಮ ದೇವಿ ರಥೋತ್ಸವದಲ್ಲಿ ಭಕ್ತರು ಜೀವಂತ ಕೋಳಿಗಳನ್ನು ತೂರಿ ದೇವಿಯನ್ನು ಸಂತೃಪ್ತ ಪಡಿಸುವ ಪರಂಪರೆಯನ್ನು ಹಲವು ದಶಕಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. 

ರಥೋತ್ಸವಕ್ಕೆ ಎಲ್ಲೆಡೆ ಬಾಳೆಹಣ್ಣು ಉತ್ತುತ್ತಿಗಳನ್ನು ತೂರುವುದು ಕಾಣಬಹುದಾಗಿದ್ದರೆ, ಕೊಟ್ಟೂರಿನಲ್ಲಿ ಇಂತಹ ವಿಶಿಷ್ಟ ಸಂಪ್ರದಾಯ ಈಗಲೂ ನಡೆದುಕೊಂಡು ಬರುತ್ತಿದೆಯಲ್ಲದೇ ದೇವಿ ಜಾತ್ರೆಗಳಲ್ಲಿ ಕುರಿ, ಕೋಳಿ, ಬಲಿ ಕೊಡುವುದು ಸಾಮಾನ್ಯ. ಆದರೆ ಕೊಟ್ಟೂರಿನಲ್ಲಿ ಪ್ರಾಣಿ ಬಲಿಯಂತಹ ಹಿಂಸೆ ನಡೆಯದೇ ಜೀವಂತ ಕೋಳಿಗಳನ್ನೇ ರಥಕ್ಕೆ ತೂರಲಾಗುತ್ತದೆ.

error: Content is protected !!