ದಾವಣಗೆರೆ, ಮೇ 23- ದುಬೈನ ಗ್ರಾಂಡ್ ಎಕ್ಸಲ್ಸರ್ ಕನ್ವೆನ್ಷನ್ ಹಾಲ್‍ನಲ್ಲಿ ಜರುಗಿದ 10ನೇ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ನಗರದ ಆರ್. ಎಲ್. ಕಾನೂನು ಕಾಲೇಜಿನ ವಿದ್ಯಾರ್ಥಿ, ಕ್ರೀಡಾಪಟು ಹಾಗೂ ತರಬೇತಿದಾರರೂ ಆಗಿರುವ ಡಾ. ಡಿ. ಸಂತೋಷ್ ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದಿರುತ್ತಾರೆ.
ಈ ಸ್ಪರ್ಧೆಯಲ್ಲಿ ಪಾಕಿಸ್ತಾನ್, ಸಿಂಗಾಪುರ್, ಮಲೇಶಿಯಾ, ಯುಎಇ, ಜರ್ಮನಿ, ಲಂಡನ್ ಸೇರಿದಂತೆ ಒಟ್ಟು ಎಂಟು ದೇಶಗಳ ಸ್ಪರ್ಧಿಗಳು ಭಾಗವಹಿಸಿದ್ದರು. ವಿಜೇತ ಸಂತೋಷ್ ಅವರನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಡಾ.ಪ್ರಭಾ ಮಲ್ಲಿಕಾರ್ಜುನ್, ಸಂಸದ ಜಿ.ಎಂ.ಸಿದ್ಧೇಶ್ವರ್, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಮತ್ತಿತರರು ಶುಭ ಹಾರೈಸಿದ್ದಾರೆ.