ಬಂಜಾರ ಸೇವಾ ಸಂಘದಿಂದ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಮೇ 28- ಬಂಜಾರ ಸೇವಾ ಸಂಘದ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ’ ಹಾಗೂ ಈ ಸಾಲಿನಲ್ಲಿ ನಿವೃತ್ತಿಯಾದ ಬಂಜಾರ ನೌಕರರಿಗೆ ಸನ್ಮಾನ ಮಾಡಲಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ ಶೇ.85 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಬಂಜಾರ ಜನಾಂಗದ ವಿದ್ಯಾರ್ಥಿಗಳಿಗೆ `ಪ್ರತಿಭಾ ಪುರಸ್ಕಾರ’ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಜೂನ್ 10ರೊಳಗಾಗಿ 9071280369, 9743483659 ಈ ವ್ಯಾಟ್ಸಾಪ್‌ ಸಂಖ್ಯೆಗೆ ಕಳುಹಿಸಬೇಕು.

error: Content is protected !!