ಎಸ್ಸೆಸ್ಸೆಲ್ಸಿ : ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ದಾವಣಗೆರೆ, ಮೇ 27- ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿಂದ ಹೆಚ್ಚು ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ನೀಡುವ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 10ರ ವರೆಗೆ ವಿಸ್ತರಿಸಲಾಗಿದೆ.

ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದವರಿಗೆ `ಕನ್ನಡ ಕೌಸ್ತುಭ’ ರಾಜ್ಯ ಪ್ರಶಸ್ತಿ, 125ಕ್ಕೆ 120ರಿಂದ 124 ಅಂಕ ಪಡೆದ ಮಕ್ಕಳಿಗೆ `ಕನ್ನಡ ಕುವರ-ಕುವರಿ’ ಜಿಲ್ಲಾ ಪ್ರಶಸ್ತಿ ಮತ್ತು 625ಕ್ಕೆ 600ಕ್ಕೂ ಅಧಿಕ ಅಂಕ ಗಳಿಸಿದವರಿಗೆ `ಸರಸ್ವತಿ ಪುರಸ್ಕಾರ’ ರಾಜ್ಯ ಪ್ರಶಸ್ತಿ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಎಚ್.ಮಂಜುನಾಥ್ ತಿಳಿಸಿದ್ದಾರೆ. ವಿವರಕ್ಕೆ 9538732777, 9481722376, 9743897578 ಸಂಪರ್ಕಿಸಿ.

error: Content is protected !!