ಎಸ್ಟಿ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ

ದಾವಣಗೆರೆ, ಮೇ 27 – ಭಾರತ ಸರ್ಕಾರದ ಬುಡಕಟ್ಟು ವುವಹಾರಗಳ ಸಚಿವಾಲಯವು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ  ರಾಷ್ಟ್ರೀಯ ಸಾಗರೋ ತ್ತರ ವಿದ್ಯಾರ್ಥಿ ವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸ ಲಾಗಿದ್ದು. ಸ್ನಾತಕೋತ್ತರ ಪದವಿ, ಪಿಹೆಚ್‍ಡಿ, ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಆಲ್‍ಲೈನ್ ಪೆೋರ್ಟಲ್‍ನಲ್ಲಿ  https://overseas.tribal.gov.in     ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸಲು ಇದೇ ದಿನಾಂಕ 31 ಕೊನೆ ದಿನ ಎಂದು ಜಿಲ್ಲಾ ಪರಿಶಿಷ್ಟ  ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

error: Content is protected !!