ದಾವಣಗೆರೆ ತಾಲ್ಲೂಕು ಹೆಮ್ಮನಬೇತೂರಿನ ಶ್ರೀ ಸಿದ್ಧೇಶ್ವರ ಪ್ರೌಢಶಾಲಾ ಆವರಣದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಹಾಗೂ ದಾವಣಗೆರೆ ತಾಲ್ಲೂಕು ಘಟಕದ ಆಶ್ರಯದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಬಸವ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.
ಹೆಮ್ಮನಬೇತೂರು ಗ್ರಾ.ಪಂ. ಅಧ್ಯಕ್ಷರಾದ ಪವಿತ್ರ ಕರಿಯಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ. ರುದ್ರಗೌಡ ಗೋಪನಾಳು ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್.ಎಂ. ಕೃಷ್ಣ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಕೆ.ಎಸ್. ಗಂಗಾಧರ್ `ಸಾಂಸ್ಕೃತಿಕ ನಾಯಕರು ಬಸವಣ್ಣನವರು’ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ, ಸಿದ್ದೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಕುಸುಮಾ ಎನ್. ಇಂಗಳಕಿ, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಆವರಗೆರೆ ರುದ್ರಮುನಿ, ಶಸಾಪ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಹೆಚ್.ಆರ್. ಲಿಂಗರಾಜ್, ಸದಸ್ಯ ಶಶಿಧರ ಹೆಚ್. ಬಸಾಪುರ ಮತ್ತಿತರರು ಭಾಗವಹಿಸಲಿದ್ದಾರೆ.