ದಾವಣಗೆರೆ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಒಟ್ಟು 38 ವರ್ಷ 9 ತಿಂಗಳಿಂದ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿರುವ ಎಂ.ವಿ.ಹೊರಕೇರಿ ಅವರು ಕಳೆದ 3 ವರ್ಷ 9 ತಿಂಗಳಿಂದ ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಸೇವೆಯಿಂದ ವಯೋ ನಿವೃತ್ತಿ ಹೊಂದಲಿದ್ದಾರೆ.
ಹರಿಹರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ಆರೋಗ್ಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷರಾ ಗಿಯೂ ಸೇವೆ ಸಲ್ಲಿಸಿದ್ದಾರೆ. ಹೊರಕೇರಿ ಅವರ ಸೇವೆಯನ್ನು ಪರಿಗಣಿಸಿ `ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿ’ ನೀಡಲಾಗಿದೆ. ಮೂಲತಃ ರಾಣೇಬೆನ್ನೂರು ತಾಲ್ಲೂಕು ಮಾಕನೂರು ಗ್ರಾಮದ ವರಾದ ಹೊರಕೇರಿ ಅವರು ಸದ್ಯ ಹರಿಹರದಲ್ಲಿ ನೆಲೆಸಿದ್ದಾರೆ.