ನಗರದಲ್ಲಿ ಇಂದು `ನಮ್ಮ ದವನ-24′ ಸಮಾರೋಪ

ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಇಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಡಿ. ಕುಂಬಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಕನ್ನಡ ರಾಪರ್ ಆಲ್ ಓಕೆ ಖ್ಯಾತಿಯ ಅಲೋಕ್ ಬಾಬು ಮತ್ತು ಸಂಗಡಿಗರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಪ್ರಾಚಾರ್ಯ ಡಾ.ಹೆಚ್.ಬಿ. ಅರವಿಂದ್ ಅಧ್ಯಕ್ಷತೆ ವಹಿಸಲಿದ್ದು, ಕಾಲೇಜಿನ ನಿರ್ದೇಶಕ ಪ್ರೊ. ವೈ. ವೃಷಭೇಂದ್ರಪ್ಪ ಮತ್ತಿತರರು ಭಾಗವಹಿಸಲಿದ್ದಾರೆ. 

error: Content is protected !!