ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ

ದಾವಣಗೆರೆ, ಜೂ. 9- ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾ ಲಯದಿಂದ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಹಾಗೂ ನೂತನ ಅವಿ ಷ್ಕಾರಗಳಲ್ಲಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟ 18 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. 

ನ್ಯಾಷನಲ್ ಅವಾರ್ಡ್ ಪೋರ್ಟಲ್ ನಲ್ಲಿ ಆನ್ ಲೈನ್ ವೆಬ್ ಸೈಟ್ https://awards.gov.in ಮೂಲಕ ಅರ್ಜಿ ಸಲ್ಲಿಸಬಹುದು. ವಿವರಕ್ಕೆ ಸಂಪರ್ಕಿಸುವ ದೂರವಾಣಿ :  08192-222701.

error: Content is protected !!