ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ, ಜಿಲ್ಲಾ ವಕೀಲರ ಸಂಘ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಎಸ್.ಪಿ.ಎಸ್ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್. ರಾಜೇಶ್ವರಿ ಹೆಗಡೆ ಜಾಥಾಕ್ಕೆ ಚಾಲನೆ ನೀಡುವರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾದ ವಾಸಂತಿ ಉಪ್ಪಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ. ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣಕುಮಾರ್ ಮತ್ತಿತರರು ಭಾಗವಹಿಸುವರು.