ದಾವಣಗೆರೆ, ಜೂ.12- ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿರುವ ಶ್ರೀ ಬಸವೇಶ್ವರ ಕಾನ್ವೆಂಟ್ ಎಲ್.ಸಿ.ಎಸ್. 1 ರಿಂದ 8 ನೇ ತರಗತಿಯವರೆಗೆ ನೀಡಲಾಗಿದ್ದ ಮಾನ್ಯತೆಯನ್ನು ಹಿಂಪಡೆಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಶ್ರೀ ಬಸವೇಶ್ವರ ಕಾನ್ವೆಂಟ್ಗೆ ಸೇರಿದ ನಿವೇಶನದ ಭೂ ಪರಿವರ್ತನೆಯ ಆದೇಶವನ್ನು ಜಿಲ್ಲಾಧಿಕಾರಿಗಳು ರದ್ದುಪಡಿಸಿದ್ದರೂ ಸಹ ಇಲಾಖೆಗೆ ತಪ್ಪು ದಾಖಲೆ, ಮಾಹಿತಿ ನೀಡಿ ಮಾನ್ಯತೆ ನವೀಕರಣ ಮಾಡಿಸಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಪ್ರಸ್ತುತ ಪ್ರಕರಣವು ನ್ಯಾಯಾಲಯದ ಹಂತದಲ್ಲಿರುವು ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣಾಧಿಕಾರಿಗಳು ವಿವರಿಸಿದ್ದಾರೆ.
ಸಾರ್ವಜನಿಕರು ಹಾಗೂ ಪೋಷಕರು ಈ ಶಾಲೆಗೆ ಪ್ರಸಕ್ತ ಸಾಲಿಗೆ ಮಕ್ಕಳನ್ನು ದಾಖಲು ಮಾಡಬಾರದೆಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕರೆ ನೀಡಿದ್ದಾರೆ.