ಜೂನ್ ಮಾಹೆಗೆ ಪಡಿತರ ಹಂಚಿಕೆ

ದಾವಣಗೆರೆ, ಜೂ.12- ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ  ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, ರಾಗಿ 2 ಕೆ.ಜಿ ಉಚಿತವಾಗಿ ವಿತರಿಸಲಾಗುತ್ತದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ತಾಂ ತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿ ಕೊಳ್ಳಬಹುದೆಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವತ್ಥ್‌ ತಿಳಿಸಿದ್ದಾರೆ.

error: Content is protected !!