ಎಸ್ಎಸ್ ಕೇರ್ ಟ್ರಸ್ಟ್‌ನಿಂದ ಇಂದು ಡಯಾಲಿಸಿಸ್ ಘಟಕ-3 ಉದ್ಘಾಟನಾ ಸಮಾರಂಭ

ದಾವಣಗೆರೆ : ಎಸ್ಎಸ್ ಕೇರ್ ಟ್ರಸ್ಟ್ ವತಿಯಿಂದ ನಗರದ ಕೆ.ಆರ್.ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಹೆಚ್ಚುವರಿ ಡಯಾಲಿಸಿಸ್ ಘಟಕ – 3 ಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಎಸ್.ಎಸ್. ಕೇರ್ ಟ್ರಸ್ಟ್ ಅಧ್ಯಕ್ಷರೂ ಆದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಡಯಾಲಿಸಿಸ್ ಘಟಕದ ಉದ್ಘಾಟನೆ ನೆರವೇರಿಸಲಿದ್ದಾರೆ. ಎಸ್.ಎಸ್.ಕೇರ್ ಟ್ರಸ್ಟ್‌ನ ಅಜೀವ ಸದಸ್ಯರೂ ಆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

error: Content is protected !!