ದಾವಿವಿ ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ಡಾ. ನೀತಾ

ದಾವಿವಿ ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ಡಾ. ನೀತಾ

ದಾವಣಗೆರೆ, ಜೂ. 13- ದಾವಣಗೆರೆ ವಿಶ್ವವಿದ್ಯಾನಿಲಯದ ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎ.ಜೆ.ನೀತಾ ಅವರು ನೇಮಕಗೊಂಡಿದ್ದಾರೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿ ಲಯಗಳ ಕಾಯ್ದೆ 200ರ ಸೆಕ್ಷನ್ 30(1)(vi) ರನ್ವಯ ದಾವಣಗೆರೆ ವಿಶ್ವವಿದ್ಯಾನಿ ಲಯದ ಕುಲಪತಿಗಳ ಅನುಮೋದನೆಯ ಮೇರೆಗೆ ಈ ನೇಮಕ ಮಾಡಲಾಗಿದೆ.

ಡಾ. ನೀತಾ ಅವರನ್ನು ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಮತ್ತು ಬಿಇಎ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದೆ.

error: Content is protected !!