ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಇಂದಿನಿಂದ ಇದೇ ದಿನಾಂಕ 19ವರೆಗೆ ಐದು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2024 ಏರ್ಪಡಿಸಲಾಗಿದೆ. ರಾಜ್ಯದ ನೂರಕ್ಕೂ ಹೆಚ್ಚು ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಭಾಗವಹಿಸಲಿದ್ದು, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ರಸಪ್ರಶ್ನೆ, ಪ್ರಹಸನ, ಚಿತ್ರಕಲಾ, ನೃತ್ಯ, ವಸ್ತು ಪ್ರದರ್ಶನ, ಸುಗಮ ಸಂಗೀತ, ಸಮೂಹ ಗಾಯನ ಸ್ಪರ್ಧೆಗಳು ನಡೆಯಲಿವೆ.
ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ ಇಂದು ನಡೆಯುವ ಯುವಜನೋತ್ಸವವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಲಿದ್ದಾರೆ. ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಚಲನಚಿತ್ರ ನಟ ನೀರ್ನಳ್ಳಿ ರಾಮಕೃಷ್ಣ ವಿಶೇಷ ಆಹ್ವಾನಿತರಾಗಿ ಆಗಮಿ ಸುವರು. ಎನ್‌ಎಸ್‌ಎಸ್ ಪ್ರಾಂತೀಯ ನಿರ್ದೇಶಕ ಡಿ.ಕಾರ್ತಿಕೇಯನ್, ರಾಜ್ಯ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನ ಗೌಡ್ರ ಅತಿಥಿಗಳಾಗಿ ಭಾಗವಹಿಸುವರು.