ಸಮವಸ್ತ್ರ ವೃತ್ತಿಯ ವಿವಿಧ ಹುದ್ದೆಗಳಿಗೆ ಸೇರಬಸುವ ಅಭ್ಯರ್ಥಿಗಳಿಗೆ ತರಬೇತಿ

ದಾವಣಗೆರೆ, ಜೂ.16- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ – 1, 2 (ಎ), 3 (ಎ), 3 (ಬಿ) ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ನಿಂದ ಪಡೆಯಬಹುದು. 

ದಕ್ಷಿಣ ಕನ್ನಡ ಜಿಲ್ಲೆ  – ದೂ.ಸಂ. 0824-2225078, ಉಡುಪಿ ಜಿಲ್ಲೆ – 0820-2574881,  ಉತ್ತರ ಕನ್ನಡ ಜಿಲ್ಲೆ – ದೂ.ಸಂ : 08382-226589 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

error: Content is protected !!