ನಗರದಲ್ಲಿ ಇಂದು ವೀರಶೈವ ನೌಕರರ ಪತ್ತಿನ ಸಹಕಾರ ಸಂಘದಿಂದ ಪುರಸ್ಕಾರ

ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಷೇರುದಾರರ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10.30ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಸುರೇಶ್ ಬಿ. ಇಟ್ನಾಳ್ ಕಾರ್ಯಕ್ರಮ ಉದ್ಘಾಟಿಸುವರು. ಲೋಕಣ್ಣ ಮಾಗೋಡ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಉಮಾ ಪ್ರಶಾಂತ್ ಪ್ರತಿಭಾ ಪುರಸ್ಕಾರ ನೀಡಲಿದ್ದು, ಬಿ. ಪಾಲಾಕ್ಷಿ ಪ್ರಾಸ್ತಾವಿಕ ನುಡಿಗಳನಾಡಲಿದ್ದಾರೆ. ಡಾ. ಬಿ.ಜಿ. ಸಿದ್ದಲಿಂಗಮ್ಮ ಉಪನ್ಯಾಸ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಬಿ. ವಾಮದೇವಪ್ಪ, ವೀರೇಶ ಎಸ್. ಒಡೇನಪುರ, ಕೆ. ಶಿವಶಂಕರ್‌, ಎನ್.ಇ. ನಟರಾಜ್, ರೇವಣಸಿದ್ದಪ್ಪ ಅಂಗಡಿ ಉಪಸ್ಥಿತರಿರುವರು.

error: Content is protected !!