ವೀರಶೈವ ಸಭಾದಿಂದ ಇಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ಗೆ ಅಭಿನಂದನೆ

ವೀರಶೈವ ಸಭಾದಿಂದ ಇಂದು ಸಂಸದೆ  ಪ್ರಭಾ ಮಲ್ಲಿಕಾರ್ಜುನ್‌ಗೆ ಅಭಿನಂದನೆ

ದಾವಣಗೆರೆ, ಜೂ. 17- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನಾಳೆ ದಿನಾಂಕ 18 ರಂದು ಮಂಗಳವಾರ ಸಂಜೆ 5 ಗಂಟೆಗೆ ನಗರದ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಮುಖಂಡ ಐಗೂರು ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ, ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್.ಎಸ್. ಗಣೇಶ್, ಜವಳಿ ಉದ್ಯಮಿ ಬಿ.ಸಿ. ಉಮಾಪತಿ ಮತ್ತಿತರರು ಭಾಗವಹಿಸಲಿದ್ದಾರೆ.  ಇದೇ ವೇಳೆ ನೂತನ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಸನ್ಮಾನಿಸಲಾಗುವು ದು ಎಂದು ಹೇಳಿದರು. ಕಾರ್ಯಕ್ರಮಕ್ಕೆ ತಾಲ್ಲೂಕುಗಳ ಸಮಾಜ ಬಾಂಧ ವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಆಗಮಿಸುವಂತೆ ಕೋರಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಪದಾಧಿಕಾರಿಗಳಾದ ಬಿ.ಜಿ. ರಮೇಶ್, ಪ್ರಕಾಶ್ ಪಾಟೀಲ್, ಸಿದ್ದೇಶ್, ಕೊರಟಿಕೆರೆ ಶಿವಕುಮಾರ್ ಉಪಸ್ಥಿತರಿದ್ದರು.

error: Content is protected !!