ಪ್ರತಿಭಟನೆ ವೇಳೆ ಹೃದಯಾಘಾತ ಎಂ. ಬಿ. ಭಾನುಪ್ರಕಾಶ್ ನಿಧನ

ಪ್ರತಿಭಟನೆ ವೇಳೆ ಹೃದಯಾಘಾತ ಎಂ. ಬಿ. ಭಾನುಪ್ರಕಾಶ್ ನಿಧನ

ಶಿವಮೊಗ್ಗ, ಜೂ. 17 – ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.

ಸೋಮವಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ಆಯೋಜನೆ ಮಾಡಿತ್ತು. ನಗರದ ಗೋಪಿವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಪಾಲ್ಗೊಂಡಿದ್ದರು.

ಪ್ರತಿಭಟನೆ ನಡೆಸುವಾಗಲೇ ಭಾನುಪ್ರಕಾಶ್‌ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು  ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್‌ ಸಾವನ್ನಪ್ಪಿದ್ದರು.

ರಾಷ್ಟೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದ ಅವರು ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

error: Content is protected !!