ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಐದು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2024 ಸಮಾರೋಪ ಸಮಾರಂಭವು ಇಂದು ನಡೆಯಲಿದೆ.
ಡಾ.ಪ್ರತಾಪ್ ಲಿಂಗಯ್ಯ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಹಾಗೂ ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ.ಸಿ.ಎಚ್.ಮುರಿಗೇಂದ್ರಪ್ಪ ಅತಿಥಿಗಳಾಗಿ ಭಾಗವಹಿಸುವರು. ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ ಉಪಸ್ಥಿತರಿರುವರು.