ಅಂತರರಾಷ್ಟ್ರೀಯ ಯೋಗ ದಿನ ಇಂದು ಯೋಗಾಸನ, ಯೋಗ ನೃತ್ಯ ಸ್ಪರ್ಧೆ

ದಾವಣಗೆರೆ, ಜೂ. 19 – ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಾಳೆ ದಿನಾಂಕ 20ರ ಗುರುವಾರ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ, ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಯೋಗ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಯದೇವ ಸರ್ಕಲ್‌ನಲ್ಲಿರುವ ಶಿವಯೋಗ ಮಂದಿರದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಹೇಳಿದರು.

10 ಗಂಟೆಯಿಂದ ಯೋಗ ನೃತ್ಯ ಸ್ಪರ್ಧೆ ನಡೆಯಲಿದೆ. 10.30ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜೂ. 21ರಂದು ರಕ್ತದಾನ ಶಿಬಿರ ಸಹ ಆಯೋಜಿಸಲಾಗಿದೆ ಎಂದು ಹೇಳಿದರು.

ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದ ವಿವಿಧ ಯೋಗ ಸಂಸ್ಥೆಗಳ ಜೊತೆಗೂಡಿ ಯೋಗ ತರಬೇತಿ ಶಿಬಿರವನ್ನೂ ಸಹ ನಡೆಸಲಾಗುತ್ತಿದೆ. ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಗುರುಬಸವ ಸ್ವಾಮೀಜಿ  ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.

error: Content is protected !!