ದಾವಣಗೆರೆ, ಜೂ.19- ಜಿಲ್ಲಾ ವಕೀಲರ ಸಂಘದಿಂದ ನಗರದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ನಾಡಿದ್ದು ದಿನಾಂಕ 21ರ ಬೆಳಗ್ಗೆ 10.30ಕ್ಕೆ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರ ತೀಯ ಸಾಕ್ಷಿ ಮಸೂದೆ-2023 ಕುರಿತು 9ನೇ ಉಪನ್ಯಾಸ ಮಾಲಿಕೆ ಆಯೋಜಿಸಲಾಗಿದೆ. ಭಾರತದ ಲೋಕಪಾಲ ನ್ಯಾಯಾಂಗ ಸದಸ್ಯ ಹಾಗೂ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್. ಪ್ರವೀಣ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.
January 10, 2025