ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಹಾಗೂ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ, ಇಂದು ಬೆಳಗ್ಗೆ 11 ಗಂಟೆಗೆ ಹರಿಹರ ತಾಲ್ಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ ಜೊತೆಗೆ ರಾಣಿ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹನಗವಾಡಿ ಎಸ್.ಎಂ. ವೀರೇಶ್, ಮುಖಂಡ ಚಂದ್ರಶೇಖರ್ ಪೂಜಾರ್ ಭಾಗವಹಿಸಲಿದ್ದಾರೆ ಎಂದು ನಗರ ಬಿಜೆಪಿ ಘಟಕದ ಅಧ್ಯಕ್ಷ ಅಜಿತ್ ಸಾವಂತ್ ತಿಳಿಸಿದ್ದಾರೆ.
January 10, 2025