ದೀನ ದಯಾಳ್ ಅಂತ್ಯೋದಯ ಯೋಜನೆ-ನಗರ ಜೀವನೋಪಾಯ ಅಭಿಯಾನ

ಹರಿಹರ, ಜೂ.23 – ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ, ಗುಂಪು ಉದ್ಯಮ ಕೈಗೊಳ್ಳಲು, ಎಸ್.ಹೆಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಸಾಲ ಪಡೆಯಲು, ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಕಾರ್ಯಕ್ರಮದಡಿ ವಿವಿಧ ತರಬೇತಿಯನ್ನು ಪಡೆಯಲು, ಮಹಿಳಾ ಸ್ವ – ಸಹಾಯ ಸಂಘಗಳನ್ನು ರಚಿಸಲು, ವಿಕಲಚೇತನ ಪುರುಷರ ಸ್ವ – ಸಹಾಯ ಸಂಘಗಳನ್ನು ರಚಿಸಲು, ಬೀದಿ ಬದಿ ವ್ಯಾಪಾರಿಗಳ ಸ್ವ – ಸಹಾಯ ಸಂಘಗಳನ್ನು ರಚಿಸಲು ಆಸಕ್ತ ಅರ್ಹ ಫಲಾನುಭವಿಗಳಿಂದ, ಗುಂಪುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗಧಿತ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಜುಲೈ 12 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸ ಬೇಕೆಂದು ನಗರಸಭೆ ಪೌರಾಯುಕ್ತ ಬಸವರಾಜ ತಿಳಿಸಿದ್ದಾರೆ.

error: Content is protected !!