ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಆಗ್ರಹ

ದಾವಣಗೆರೆ, ಜೂ. 23- ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಜನ ಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಕೂಡಲೇ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಬೇಕು ಎಂದು ಜಿಲ್ಲಾ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಂದಾಲೋಚನೆ ಮಾಡದೇ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ, ಇದೀಗ ಅನುಷ್ಠಾನ ಮಾಡಲು ಹಣಕ್ಕೆ ಪರದಾಡುತ್ತಿದೆ. ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟಕ್ಕೆ ಸಿಲುಕಿಸಿದೆ. ಸರ್ಕಾರಕ್ಕೆ ಸಾಮಾನ್ಯ ಜನರ ಬಗ್ಗೆ ಕಾಳಜಿ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಬಿ.ಬಿ. ಸಪೂರ, ಫರ್ಕುಂದ ಬಾನು, ವಸೀಂ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!