ಬನ್ನಿಕೋಡು : ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಯೋಗ ದಿನ

ಹರಿಹರ, ಜೂ.23- ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. 

ಗ್ರಾ.ಪಂ. ಅಧ್ಯಕ್ಷರಾದ ಮೀನಾಕ್ಷಮ್ಮ ರವಿಕುಮಾರ್ ಹಾಗೂ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಹೇಮಾವತಿ ಸಿದ್ದಪ್ಪ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

ಭಾರತವು ವಿಶ್ವಕ್ಕೆ ಯೋಗವನ್ನು ಪರಿಚಯಿಸಿದೆ. ವಿಶ್ವ ಮಟ್ಟದಲ್ಲಿ ಯೋಗದ ಕೀರ್ತಿ ಹೆಚ್ಚಿರುವುದು ಸಂತಸದ ಸಂಗತಿ ಆಗಿದ್ದು, ವಿದ್ಯಾರ್ಥಿಗಳು ಪ್ರತಿನಿತ್ಯ ಯೋಗಭ್ಯಾಸ ಮಾಡುವ ಮೂಲಕ ರೋಗ ಮುಕ್ತರಾಗಿ ಎಂದು ಗ್ರಾಪಂ ಅಧ್ಯಕ್ಷೆ ಮೀನಾಕ್ಷಮ್ಮ ರವಿಕುಮಾರ್ ತಿಳಿಸಿದರು. ಈ ವೇಳೆ ಎಸ್.ಡಿ.ಎಂ.ಸಿ ಸದಸ್ಯರಾದ ಮಲ್ಲಿಕಾರ್ಜುನಪ್ಪ ಹಾಗೂ ಶಾಲೆಯ ಉಪ ಪ್ರಾಂಶುಪಾಲರಾದ ವಿ.ಬಿ. ಕೊಟ್ರೆಶಪ್ಪ ಹಾಗೂ ಶಾಲಾ ಸಿಬ್ಬಂದಿ ಇದ್ದರು.

error: Content is protected !!