ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕಗಳ ಆಹ್ವಾನ

ಗದಗ, ಜೂ.24-  ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ವತಿಯಿಂದ ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ 2023-24ನೇ ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ. ಆದರೆ, ಈ ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಹಿಂದಿ ಮತ್ತು ಸಂಸ್ಕೃತ ಉತ್ತಮ ಕೃತಿ ಕರ್ತರಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುವುದು. 

ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಯು 5 ಸಾವಿರ ರೂ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. 

ಆಸಕ್ತ ಲೇಖಕರು  ಪ್ರಕಟವಾದ 3 ಕೃತಿಗಳನ್ನು ಜುಲೈ  10ರೊಳಗಾಗಿ   ಸಿ. ಕೆ. ಹೆಚ್. ಶಾಸ್ತ್ರೀ (ಕಡಣಿ) ಸದಸ್ಯರು, ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ ‘ಗಿರಿಜಾ ನಿವಾಸ’ ಪಂಚಾಕ್ಷರಿ ನಗರ, 3ನೇ  ಅಡ್ಡ ರಸ್ತೆ, ಗದಗ-582101  ಇಲ್ಲಿಗೆ ಕಳುಹಿಸಬೇಕು.

error: Content is protected !!