ನಾಳೆ ದಲಿತ ಚಳುವಳಿಯ ಸುವರ್ಣ ಮಹೋತ್ಸವ

ದಾವಣಗೆರೆ, ಜೂ.27- ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸ್ವಾಭಿಮಾನಿ ಪ್ರೊ. ಕೃಷ್ಣಪ್ಪ ಬಣ) ವತಿಯಿಂದ ದಲಿತ ಚಳುವಳಿ 50ರ ಸುವರ್ಣ ಮಹೋತ್ಸವ, ಪ್ರೊ. ಕೃಷ್ಣಪ್ಪನವರ 86ನೇ ಜಯಂತ್ಯೋತ್ಸವ ಹಾಗೂ ರಾಜ್ಯ ಮಟ್ಟದ ಸ್ವಾಭಿಮಾನಿ ಸಂಘರ್ಷ ಸಮಾವೇಶವನ್ನು ನಾಡಿದ್ದು ದಿನಾಂಕ 29ರ ಶನಿವಾರ ಬೆಳಿಗ್ಗೆ 11ಕ್ಕೆ ಹಾಸನ ನಗರದ ಡಾ.ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಹಕಾರ ಸಚಿವ ಕೆ.ಎಸ್. ರಾಜಣ್ಣ ಸಮಾವೇಶವನ್ನು ಉದ್ಘಾಟಿ ಸುವರು. ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಪ್ರೊ.ಬಿ. ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಹಾಸನ ಲೋಕಸಭಾ ಸದಸ್ಯ ಶ್ರೇಯಸ್ ಎಂ. ಪಟೇಲ್ ಅವರು ಮಾಲಾರ್ಪಣೆ ಮಾಡುವರು. ಕಲಬುರಗಿಯ ಕರ್ನಾಟಕ ಕೇಂದ್ರಿಯ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್ ವಿಶೇಷ ಉಪನ್ಯಾಸ ನೀಡುವರು. ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್‌ನ ಟ್ರಸ್ಟಿ ಶ್ರೀಮತಿ ಇಂದಿರಾ ಕೃಷ್ಣಪ್ಪ ಅವರಿಗೆ ಬಿ.ಕೆ. ಪ್ರಶಸ್ತಿ ನೀಡಿ ಗೌರವಿಸಲಾಗುವುದು.

error: Content is protected !!