ಇಂದು ಜಯದೇವ ನಾಯ್ಕ ಅವರಿಗೆ ವಕೀಲರ ಸಂಘದಿಂದ ಅಭಿನಂದನೆ

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ನ್ಯಾಯವಾದಿ ಎನ್. ಜಯದೇವ ನಾಯ್ಕ ಅವರಿಗೆ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಭವನದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಹೆಗಡೆ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ.ಕರೆಣ್ಣವರ್, ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

error: Content is protected !!