ನಗರದಲ್ಲಿ ಇಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ನಗರದಲ್ಲಿ ಇಂದು ವಚನ  ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಜಿಲ್ಲಾ ಶರಣ ಸಾಹಿತ್ಯ ಪರಿಷತ್  ಹಾಗೂ ಜಿಲ್ಲಾ ಕದಳಿ ಮಹಿಳಾ ವೇದಿಕೆ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗುರು ಬಸವ ಮಂಟಪದಲ್ಲಿ ಡಾ.ಫ.ಗು. ಹಳಕಟ್ಟಿಯವರ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕದಳಿ ಮಹಿಳಾ ವೇದಿಕೆ ಜಿಲ್ಲಾಧ್ಯಕ್ಷೆ ಗಾಯತ್ರಿ ವಸ್ತ್ರದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದು, `ವಚನ ಸಂಸ್ಕೃತಿ ಮತ್ತು ಬದುಕು  ವಿಷಯ ಕುರಿತು ನಿವೃತ್ತ ಪ್ರಾಧ್ಯಾಪಕ ಡಾ. ಹೆಚ್.ಎಸ್. ಮಂಜುನಾಥ್ ಕುರ್ಕಿ ಅನುಭಾವ ನೀಡಲಿದ್ದಾರೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ತಿಳಿಸಿದ್ದಾರೆ.

error: Content is protected !!