ಹರಿಹರ, ಜು. 3 – ತಾಲ್ಲೂಕಿನ ಗಂಗ ನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ನಾಡಿದ್ದು 5ರ ಶುಕ್ರವಾರ ಬೆಳಿಗ್ಗೆ 11ಕ್ಕೆ ನಡೆಯಲಿವೆ.
ಬೆಳಿಗ್ಗೆ 11 ಗಂಟೆಗೆ ಶ್ರೀ ಗೋಣಿ ಬಸವೇಶ್ವರ ಹಾಗೂ ನಾಗದೇವತಾ ಸ್ವಾಮಿಗಳಿಗೆ ಅಮಾವಾಸ್ಯೆಯ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ನಡೆಯುವುದು. ನಂತರ 11.30 ಕ್ಕೆ ಮಹಾ ಪ್ರಸಾದ ಸೇವೆ ಜರುಗುವುದು.
ಸಂಕಪ್ಪರ ಶ್ರೀಮತಿ ರಂಗಮ್ಮ ಲೇ. ಬಸಪ್ಪ, ಶ್ರೀಮತಿ ಕಲ್ಪನ ಶ್ರೀಮತಿ ಪೂರ್ಣಿಮಾ ಮತ್ತು ಮಕ್ಕಳು, ತಳವಾರ ಕೇರಿ, ದಾವಣಗೆರೆ ಇವರು ಪ್ರಸಾದ ವ್ಯವಸ್ಥೆ ಏರ್ಪಡಿಸಿದ್ದಾರೆ. ಶ್ರೀ ಗೋಣಿ ಬಸವೇಶ್ವರ ಸ್ವಾಮಿ ಹೊರಮಠ ಹಾಗೂ ಶ್ರೀ ಹನುಮಂತ ದೇವರ ಜೀರ್ಣೋದ್ಧಾರ ಸಮಿತಿ ಆಶ್ರಯ ದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಧ್ಯಕ್ಷ ಜಿ.ಎಂ. ನಾಗೇಂದ್ರಪ್ಪ, ಕಾರ್ಯದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದ್ದಾರೆ.