ದಾವಣಗೆರೆ, ಜು.3- ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಸರಿಯಾದ ತನಿಖೆ ನಡೆಸುವ ಮೂಲಕ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸ ಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿ.ಬಿ. ಸಪೂರ್, ಫರ್ಕುಂದ, ಮೊಹಮದ್ ಇರ್ಫಾನ್ ರಜವಿ, ಇಸೂಫ್ ಅಲಿಖಾನ್, ವಾಸೀಂ ಮತ್ತಿತರರು ಉಪಸ್ಥಿತರಿದ್ದರು.