ದಾವಣಗೆರೆ, ಜು.4 – ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ವೆಬ್ಸೈಟ್ ವಿಳಾಸ: www.depwd.gov.in ಮತ್ತು www.awards.gov.in ರಲ್ಲಿ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಯೋಜಕರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
February 26, 2025