ದಾವಣಗೆರೆ, ಜು.5- ಡಿ.ಟಿ. ಶ್ರೀನಿವಾಸ್ ಅಭಿಮಾನಿ ಬಳಗದ ವತಿಯಿಂದ ನಾಡಿದ್ದು ದಿನಾಂಕ 6ರ ಶನಿವಾರ ಮಧ್ಯಾಹ್ನ 1.30ಕ್ಕೆ ನಗರದ ಬಿಐಇಟಿ ಆವರಣದ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಭವನದಲ್ಲಿ ನೂತನ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಳಗದ ಅಧ್ಯಕ್ಷ ಎಸ್.ಪ್ರದೀಪ್ಕುಮಾರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ. ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಅಬ್ದುಲ್ ಜಬ್ಬಾರ್, ಪಾಲಿಕೆ ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಮಾಜಿ ಶಾಸಕರಾದ ಎಸ್.ರಾಮಪ್ಪ, ಪೂರ್ಣಿಮಾ ಶ್ರೀನಿವಾಸ್ ಪಾಲ್ಗೊಳ್ಳುವರು. ಬಿಐಇಟಿ ಪ್ರಾಚಾರ್ಯ ಡಾ.ಎಚ್.ಬಿ. ಅರವಿಂದ್, ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಪ್ರಾಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರೊ.ಸಿ.ಎಚ್. ಮುರುಗೇಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಳಗದ ಎಸ್.ಜಿ. ನಾಗರಾಜ್, ಎಂ. ವೀರೇಶ್, ಎಲ್. ಭೀಮಪ್ಪ, ಕೆ.ಎಚ್. ವೆಂಕಟೇಶ್, ಕಾತ್ರಿಕಟ್ಟೆ ತಿಪ್ಪೇಸ್ವಾಮಿ ಹಾಜರಿದ್ದರು.