ಚಿತ್ರದುರ್ಗ, ಜು. 7 – ಎಚ್. ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು. ಇದೇ ದಿನಾಂಕ 10 ಕೊನೆ ದಿನಾಂಕ ಆಗಿದೆ.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಯ ನಿವಾಸಿ ಆಗಿರಬೇಕು, ಚಿತ್ರದುರ್ಗ ಜಿಲ್ಲೆಯ ಶಾಲಾ-ಕಾಲೇಜ್‍ಗಳಲ್ಲಿ ಓದಿರಬೇಕು. ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಆಕರ್ಷಕ ಫಲಕ, ಶಾಲು, ಹಾರ, ಸನ್ಮಾನ ಪತ್ರದ ಜೊತೆಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸಲು ಬಯಸುವವರು ಆನ್‍ಲೈನ್ ಮೂಲಕ hanjaneyacharitabletrust.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 97430 48006 ಅಥವಾ 80730 50019 ಗೆ ಸಂಪರ್ಕಿಸಬಹುದು ಎಂದು ಕಾರ್ಯಕ್ರಮ ಸಂಘಟಕರಾದ ಸಿ.ಎನ್. ಕುಮಾರ್, ಎ. ನಂದೀಶ್ ತಿಳಿಸಿದ್ದಾರೆ.