ಕೇಂದ್ರ ಸರ್ಕಾರ ಕಳೆದ 3 ತಿಂಗಳ ಹಿಂದೆಯಷ್ಟೇ ಜಾರಿಗೆ ತಂದ ಭಾರತ್ ಅಕ್ಕಿ ಯೋಜನೆಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ನಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11.30ಕ್ಕೆ ಮಹಾನಗರ ಪಾಲಿಕೆಯ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅಧ್ಯಕ್ಷತೆಯಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
January 11, 2025