ಹರಿಹರ, ಜು.7- ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದ ಸಭಾಂಗಣದಲ್ಲಿ ನಾಡಿದ್ದು ದಿನಾಂಕ 9 ರಿಂದ 11 ರವರಿಗೆ ಬಾಳೆಹೊನ್ನೂರಿನ ಶ್ರೀ ಮದ್ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಮಹಾ ಸ್ವಾಮಿಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಜಾಗೃತಿ ಸಮಾರಂಭ ನಡೆಯಲಿದೆ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ದಿನಾಂಕ 9 ರ ಮಂಗಳವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿಗೆ ಹಾಗೂ ಬಸವೇಶ್ವರ ಮೂರ್ತಿಗೆ ಮಹಾರುದ್ರಾಭಿಷೇಕ, ಅಷ್ಟೋತ್ತರ ಸಹಸ್ರ ಬಿಲ್ವಾರ್ಚನೆ, ಅಲಂಕಾರಯುಕ್ತ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6 ಗಂಟೆಗೆ ಧರ್ಮ ಜಾಗೃತಿ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ. ವೀರಸೋಮೇಶ್ವರ ಸ್ವಾಮೀಜಿ, ನೇತೃತ್ವವನ್ನು ಮಳಲಿ ಸಂಸ್ಥಾನಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು.
December 23, 2024