ದಾವಣಗೆರೆ, ಜು.7- ಇಲ್ಲಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಈಚೆಗೆ ವಿದ್ಯಾರ್ಥಿ ಸಂಘದ ಚುನಾವಣೆ ಮಾಡುವ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ಎಸ್.ಎಂ. ಗಿರೀಶ್, ವಿದ್ಯಾರ್ಥಿ ಕಾರ್ಯದರ್ಶಿಯಾಗಿ ಪಿ. ಸತ್ಯಭಾಮ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಎಸ್.ಎಂ. ವಿಕಾಸ್, ಕ್ರೀಡಾ ಕಾರ್ಯದರ್ಶಿಯಾಗಿ ಎಸ್.ಬಿ. ಶಿವಕುಮಾರ್, ಪ್ರವಾಸ ಕಾರ್ಯದರ್ಶಿಯಾಗಿ ಕೆ.ಆರ್. ದರ್ಶನ್ ಹಾಗೂ ಕೆ.ವಿ. ಚೈತ್ರಾ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶಾಲೆಯ ಮುಖ್ಯ ಶಿಕ್ಷಕ ಬಿ. ಪರಮೇಶ್ವರಪ್ಪ ಮತ್ತು ಶಿಕ್ಷಕ ಕಾರ್ಯದರ್ಶಿಯಾಗಿ ಪಿ.ಎಸ್. ತಾರಾ ಸಂಘದಲ್ಲಿದ್ದಾರೆ.