ದಾವಣಗೆರೆ, ಜು.7- ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆ ಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯ ವಾಗಿದೆ. ಸ್ವತಃ ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್ವಾರು ಬೆಳೆದ ವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆಯ ವಿವರಗಳನ್ನು ಬೆಳೆ ಸಮೀಕ್ಷೆ ಆಪ್ನಲ್ಲಿ ಅಪ್ಲೋಡ್ ಮಾಡ ಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಮುಂಗಾರು ರೈತರ ಬೆಳೆ ಸಮೀಕ್ಷೆ (Kharif Season Farmer App 202 4-25) ಆಪನ್ನು ಗೂಗಲ್ ಪ್ಲೇಸ್ಟೋರ್ ಮೂ ಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಈ ಕೆಳಗಿನ ಚಟುವಟಿಕೆಗಳಿಗೆ ಬಳಸಬಹುದಾಗಿದೆ.
ಕೃಷಿ, ರೇಷ್ಮೆ, ತೋಟಗಾರಿಕಾ ಬೆಳೆಗಳ ವಿಸ್ತೀರ್ಣ ಎಣಿಕೆ ಕಾರ್ಯಗಳಲ್ಲಿ, ಬೆಳೆ ವಿಮೆ ಯೋಜನೆಯ ಸರ್ವೆ ನಂಬರ್ವಾರು ಬೆಳೆ ಪರಿ ಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸಲು. ಆರ್.ಟಿ.ಸಿ.ಯಲ್ಲಿ ಬೆಳೆ ವಿವರಗಳ ದಾಖಲಾತಿಗಾಗಿ. ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್ ಅಡಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಹಾನಿಗೊಳಗಾದ ಬೆಳೆಯ ವಿಸ್ತೀರ್ಣದ ವಿವರ ಹಾಗೂ ಅರ್ಹ ಫಲಾನು ಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ.
ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆಪ್ನಲ್ಲಿ ನಮೂದಿಸಲು ಕೋರಿದೆ.
ಆಯಾ ಗ್ರಾಮದಲ್ಲಿರುವ ವಿದ್ಯಾವಂತ ಯುವಕರನ್ನು ಖಾಸಗಿ ನಿವಾಸಿಗಳೆಂದು ಗುರುತಿಸಲಾಗಿದ್ದು, ಅವರ ಸಹಾಯದಿಂದಲೂ ಬೆಳೆ ಸಮೀಕ್ಷೆ ಆಪ್ನಲ್ಲಿ ತಾವು ಬೆಳೆದ ಬೆಳೆಯನ್ನು ದಾಖಲಿಸಬಹುದಾಗಿದೆ.
ಮಾಹಿತಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.