ಹರಿಹರದಲ್ಲಿ ಇಂದಿನಿಂದ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ

ಹರಿಹರದಲ್ಲಿ ಇಂದಿನಿಂದ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ

ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದ ಸಭಾಂಗಣದಲ್ಲಿ ಇಂದಿನಿಂದ ಮೂರು ದಿನ ಶ್ರೀ ಮದ್‌ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಮಹಾಸ್ವಾಮಿ ಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮಜಾಗೃತಿ ಸಮಾರಂಭ ನಡೆಯಲಿದೆ.

ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿಗೆ ಹಾಗೂ ಬಸವೇಶ್ವರ ಮೂರ್ತಿಗೆ ಮಹಾರುದ್ರಾಭಿ ಷೇಕ ಅಷ್ಟೋತ್ತರ ಸಹಸ್ರ ಬಿಲ್ವಾರ್ಚಾನೆ ಅಲಂಕಾರ ಯುಕ್ತ ಪೂಜೆ, ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6 ಗಂಟೆಗೆ ಧರ್ಮ ಜಾಗೃತಿ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ. ವೀರ ಸೋಮೇಶ್ವರ ಸ್ವಾಮೀಜಿ, ನೇತೃತ್ವವನ್ನು ಮಳಲಿ ಸಂಸ್ಥಾನಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು.

ಉದ್ಘಾಟನೆಯನ್ನು ಶಾಸಕ ಬಿ.ಪಿ. ಹರೀಶ್, ಮುಖ್ಯ ಅತಿಥಿಗಳಾಗಿ ಬಿಜೆಪಿ ಮುಖಂಡರಾದ ಗಾಯತ್ರಿ ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್, ಜುಂಜಪ್ಪ ಹೆಗ್ಗಪ್ಪ, ದಾವಣಗೆರೆ ಕೆ.ಎಂ.ಸುರೇಶ್, ಮಲೇಬೆನ್ನೂರು ಚಿದಾನಂದಪ್ಪ, ಚಂದ್ರಶೇಖರ್ ಪೂಜಾರ್ ಹಾಗೂ ಇತರರು ಭಾಗವಹಿಸಲಿದ್ದಾರೆ.

ನಾಳೆ ದಿನಾಂಕ 10 ರ ಬುಧವಾರ ಬೆಳಗ್ಗೆ ಇಷ್ಟಲಿಂಗ ಪೂಜೆ ಸಂಜೆ 6 ಗಂಟೆಗೆ ಧರ್ಮ ಜಾಗೃತಿ ಸಮಾರಂಭ, ದಿವ್ಯ ಸಾನ್ನಿಧ್ಯವನ್ನು ರಂಭಾಪುರಿ ಪೀಠದ ಜಗದ್ಗುರು ಶ್ರೀ ವೀರಸೋಮೇಶ್ವರ ಮಹಾಸ್ವಾಮೀಜಿ ವಹಿಸುವರು. ಹರಪನಹಳ್ಳಿ ತೆಗ್ಗಿನಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಲತಾ ಮಲ್ಲಿಕಾರ್ಜುನ್, ಡಿ.ಜೆ.ಶಿವಾನಂದಪ್ಪ, ಬಿ.ಎಂ.ವಾಗೀಶ್ ಸ್ವಾಮಿ, ಶಶಿಕುಮಾರ್ ಮೆಹರ್ವಾಡೆ, ಬಿ.ಹಾಲೇಶಗೌಡ್ರು, ಕೊಂಡಜ್ಜಿ ಈಶ್ವರಪ್ಪ ಇತರರು ಭಾಗವಹಿಸಲಿದ್ದಾರೆ.

ನಾಡಿದ್ದು ದಿನಾಂಕ 11 ರ ಗುರುವಾರ ಬೆಳಗ್ಗೆ ಇಷ್ಟಲಿಂಗ ಪೂಜೆ ಸೇರಿದಂತೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ವಿಶೇಷ ಸಾಧನೆ ಮಾಡಿದ ಸಾಧಕರಿಗೆ ವಿಶೇಷ ಗುರುರಕ್ಷೆ ಸೇರಿದಂತೆ ಇತರೆ ಕಾರ್ಯಕ್ರಮಗಳು ನಡೆಯಲಿವೆ.

error: Content is protected !!