ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಆನ್ಲೈನ್ನಲ್ಲಿ ಶರಣ ಚಿಂತನ ಗೋಷ್ಠಿಯು ಇಂದು ಸಂಜೆ 7 ರಿಂದ 9ರವರೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ಗಾಯತ್ರಿ ವಸ್ತ್ರದ್ ವಹಿಸುವರು. ಗದಗ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷರಾದ ಸುಧಾ ಹುಚ್ಚಣ್ಣವರ ಅವರು ವಚನ ಸಾಹಿತ್ಯದಲ್ಲಿ ವೈಜ್ಞಾನಿಕತೆ ವಿಷಯದ ಕುರಿತು ಉಪನ್ಯಾಸ ನೀಡುವರು.
https://meet.google.com/xsf-szun-orf ಈ ಲಿಂಕ್ ಅನ್ನು ಉಪಯೋಗಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಇವರು ಕೋರಿದ್ದಾರೆ.